ಡ್ರೋನ್ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.
ಡ್ರೋನ್ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.
ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್‌ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು ಹುಟ್ಟುಹಾಕಿದೆ.
ಇಸ್ರೇಲ್ ಡ್ರೋನ್‌ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು, ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…