ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

September 9, 2023
7:48 PM
ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮೇಲೆ ಈ ಬಾರಿ ವರುಣ ಕೃಪೆಯೇ ತೋರಲಿಲ್ಲ ಅನ್ನೋದು ಬಹು ದೊಡ್ಡ ನೋವು. ರೈತ #Farmer, ರಾಜ್ಯದ ಜನತೆ, ಪ್ರಾಣಿ ಪಕ್ಷಿ ಎಲ್ಲವೂ ಈ ಬಾರಿ ಪರಿತಪಿಸಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ರಾಜ್ಯ ಸರ್ಕಾರ#State govt ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ#Siddaramaiah ಹೇಳಿದ್ದಾರೆ.

Advertisement
Advertisement

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ. ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.

Advertisement

ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.

ನಾವು ಜಿಡಿಪಿ ಬೆಳವಣಿಗೆಗೆ ಕೃಷಿ, ಸೇವಾ ಹಾಗೂ ಕೈಗಾರಿಕಾ ವಲಯ ಆರಿಸುತ್ತೇವೆ. ಕೃಷಿ ವಲಯ ಬೆಳೆದರೆ ಜಿಡಿಪಿ ಬೆಳೆಯುತ್ತದೆ. ಕೃಷಿ ಬೆಳೆಯದೇ ಇದ್ದರೆ ತಲಾ ಆದಾಯ ಕಡಿಮೆಯಾಗಲಿದೆ. ಆಗ ಜನ ಕೊಂಡುಕೊಳ್ಳುವುದಿಲ್ಲ. ಕೃಷಿ ಜನರಿಗೆ ಆಸಕ್ತಿ ಬರಬೇಕು. ಯುವಕರಿಗೆ ಹೆಚ್ಚು ಆಸಕ್ತಿ ಇರಬೇಕು. ಟೀಚರ್ ಆಗಿ ನಿವೃತ್ತ ಆದರೂ ಒಬ್ಬರು ಕೃಷಿ ಮಾಡುತ್ತಿದ್ದಾರೆ. ಬೋರ್‌ವೆಲ್ ಹಾಕಿ ಕೃಷಿ ಮಾಡಿ ಯಶಸ್ಸು ಆಗಿದ್ದಾರೆ. ಎಲ್ಲ ರೈತರು ಆ ಪ್ರಯತ್ನ ಮಾಡಬೇಕು. ಅದಕ್ಕೆ ಪೂರಕ ಕೆಲಸ ವಿವಿ ಮಾಡಬೇಕು ಎಂದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror