ಕರ್ನಾಟಕದ ಮೇಲೆ ಈ ಬಾರಿ ವರುಣ ಕೃಪೆಯೇ ತೋರಲಿಲ್ಲ ಅನ್ನೋದು ಬಹು ದೊಡ್ಡ ನೋವು. ರೈತ #Farmer, ರಾಜ್ಯದ ಜನತೆ, ಪ್ರಾಣಿ ಪಕ್ಷಿ ಎಲ್ಲವೂ ಈ ಬಾರಿ ಪರಿತಪಿಸಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ರಾಜ್ಯ ಸರ್ಕಾರ#State govt ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ#Siddaramaiah ಹೇಳಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ. ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.
ನಾವು ಜಿಡಿಪಿ ಬೆಳವಣಿಗೆಗೆ ಕೃಷಿ, ಸೇವಾ ಹಾಗೂ ಕೈಗಾರಿಕಾ ವಲಯ ಆರಿಸುತ್ತೇವೆ. ಕೃಷಿ ವಲಯ ಬೆಳೆದರೆ ಜಿಡಿಪಿ ಬೆಳೆಯುತ್ತದೆ. ಕೃಷಿ ಬೆಳೆಯದೇ ಇದ್ದರೆ ತಲಾ ಆದಾಯ ಕಡಿಮೆಯಾಗಲಿದೆ. ಆಗ ಜನ ಕೊಂಡುಕೊಳ್ಳುವುದಿಲ್ಲ. ಕೃಷಿ ಜನರಿಗೆ ಆಸಕ್ತಿ ಬರಬೇಕು. ಯುವಕರಿಗೆ ಹೆಚ್ಚು ಆಸಕ್ತಿ ಇರಬೇಕು. ಟೀಚರ್ ಆಗಿ ನಿವೃತ್ತ ಆದರೂ ಒಬ್ಬರು ಕೃಷಿ ಮಾಡುತ್ತಿದ್ದಾರೆ. ಬೋರ್‌ವೆಲ್ ಹಾಕಿ ಕೃಷಿ ಮಾಡಿ ಯಶಸ್ಸು ಆಗಿದ್ದಾರೆ. ಎಲ್ಲ ರೈತರು ಆ ಪ್ರಯತ್ನ ಮಾಡಬೇಕು. ಅದಕ್ಕೆ ಪೂರಕ ಕೆಲಸ ವಿವಿ ಮಾಡಬೇಕು ಎಂದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…