Advertisement
MIRROR FOCUS

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.

Share

ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.

Advertisement
Advertisement

ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.

Advertisement

ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್‍ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.

ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

7 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

15 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

18 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago