ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity) ಪರದಾಡುವ ಸ್ಥಿತಿ ಬಂದೊದಗಿದೆ. ಅದರಲ್ಲೂ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ (Gims Hospital Gadag) ಬರದ ಬಿಸಿ ರೋಗಿಗಳಿಗೂ ತಟ್ಟಿದೆ. ಆಸ್ಪತ್ರೆಗೆ ನೀರಿನ ಅಭಾವ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಸಿಬ್ಬಂದಿಗಳು ಹಾಗೂ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆನಲ್ಲೂ ನೀರಿಗಾಗಿ ಪರದಾಡುವಂತಾಗಿದೆ.
ಕುಡಿಯುವ ನೀರಿಗಾಗಿ ಜನಾಕ್ರೋಶ: ಇಷ್ಟು ಮಾತ್ರವಲ್ಲದೇ ಕುಡಿಯುವ ನೀರಿಗಾಗಿ ಜನಾಕ್ರೋಶ ಎದ್ದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಲ್ಲಿರುವ ಗ್ರಾಮ ಪಂಚಾಯತ್‍ಗೆ ಮುತ್ತಿಗೆ ಹಾಕಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸವಡಿ ಗ್ರಾಮ ಪಂಚಾಯತ್ ಕಳೆದ 20 ದಿನಗಳಿಂದ ನೀರು ಪೂರೈಸಿಲ್ಲ. ಹೀಗಾಗಿ ಪಿಡಿಓ, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರು, ಮಕ್ಕಳು, ಪುರುಷರು ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿದ್ದಾರೆ.
ಮೊದಲು ಇತರೆ ಬಳಕೆಗೆ ಫ್ಲೋರೈಡ್ ಹಾಗೂ ಗಡಸು ನೀರನ್ನಾದ್ರೂ ಬಿಡುತ್ತಿದ್ದರು. ಈಗ ಯಾವ ಕಲುಷಿತ ನೀರೂ ಸಹ ಪೂರೈಸುತ್ತಿಲ್ಲ ಅಂತ ಜನ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸಮರ್ಪಕ ನೀರು ಪೂರೈಸದಕ್ಕೆ ಖಾಲಿ ಕೊಡಗಳು ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿಸಿ, ಜಿ.ಪಂ ಸಿ.ಇ.ಓ, ತಹಶೀಲ್ದಾರ್ ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…