ರಾಜ್ಯದಲ್ಲಿ ಬರ ಪರಿಸ್ಥಿತಿ : ಸಂಕಷ್ಟದಲ್ಲಿ ರೈತಾಪಿ ವರ್ಗ : ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

September 21, 2023
10:42 PM
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ತಿಳಿಸಿದ್ದಾರೆ.

ರಾಜ್ಯ ಸುಭಿಕ್ಷವಾಗಿದ್ದಾಗ ನಾಡಹಬ್ಬ ಮೈಸೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಈ ಭಾರಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಆಗಿದ್ದರಿಂದ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ಈ ಕುರಿತಾಗಿ ಟ್ವಿಟರ್‌ (X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡಬೇಕಾ ಅಥವಾ ಅದ್ಧೂರಿ ದಸರಾ ಆಚರಣೆ ಮಾಡಬೇಕಾ ಎನ್ನುವ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿತ್ತು. ಅದ್ಧೂರಿ ದಸರಾ ಆಚರಣೆಗೆ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಮುಂಗಾರು ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror