ರಾಜ್ಯ ಸುಭಿಕ್ಷವಾಗಿದ್ದಾಗ ನಾಡಹಬ್ಬ ಮೈಸೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಈ ಭಾರಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಆಗಿದ್ದರಿಂದ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತಾಗಿ ಟ್ವಿಟರ್ (X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡಬೇಕಾ ಅಥವಾ ಅದ್ಧೂರಿ ದಸರಾ ಆಚರಣೆ ಮಾಡಬೇಕಾ ಎನ್ನುವ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿತ್ತು. ಅದ್ಧೂರಿ ದಸರಾ ಆಚರಣೆಗೆ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಮುಂಗಾರು ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…