15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ನವೆಂಬರ್ 19ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ ಸಂಜೆ ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 17ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಕಡಿಮೆಯಾಗಿ 18ರಿಂದ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.ಈಗಿನಂತೆ ನವೆಂಬರ್ 19ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸುವ ಲಕ್ಷಣಗಳಿವೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…