ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

June 27, 2024
12:44 PM
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನಿರಂತರ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.

Advertisement
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ  ಸ್ನಾನ ಘಟ್ಟ ಮುಳುಗಿದೆ. ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾದ ವತಿಯಿಂದ ಸೂಚನೆ ನೀಡಲಾಗಿದೆ.

ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ  ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ  ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್‌ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.

  • ಅಂತರ್ಜಾಲ ಮಾಹಿತಿ

Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group