ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.
ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ ನಸುಕಿನ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.
Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…