ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣ (Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ. ಆದರೆ ಉತ್ತರ ಕರ್ನಾಟಕದ(North KArnataka) ಕೆಲ ಜಿಲ್ಲೆಗಳಲ್ಲಿ ಇನ್ನು ಮಳೆರಾಯ ಕೃಪೆ ತೋರಿಲ್ಲ. ಅಣೆಕಟ್ಟುಗಳಲ್ಲಿ(Dam) ನೀರು ಪಾತಾಳ ಸೇರುತ್ತಿದೆ. ಕೃಷಿಗೆ(Agriculture) ಮಾತ್ರವಲ್ಲದೆ ಜನ-ಜಾನುವಾರುಗಳಗೂ(Cattle) ನೀರಿಲ್ಲದಂತಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ (TungaBhadra River) ಅಡ್ಡಲಾಗಿ ತುಂಗಭದ್ರಾ ಜಲಾಶಯವನ್ನು(TungaBhadra Dam) ನಿರ್ಮಾಣ ಮಾಡಲಾಗಿದೆ. ಇದೀಗ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್(Dead storage) ತಲುಪಿದೆ.
ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಕ್ಕಿದ್ದು, ಈ ಡ್ಯಾಂನಲ್ಲಿರುವ ನೀರು, ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಪ್ರಮುಖ ನೀರಿನ ಮೂಲವಾಗಿದೆ. ಆದರೆ 105.79 ಟಿಎಂಸಿ ನೀರು ಸಾಮಾರ್ಥ್ಯದ ಈ ಡ್ಯಾಂ ನಲ್ಲಿ ಸದ್ಯ ಇರೋ ನೀರಿನ ಪ್ರಮಾಣ ಕೇವಲ 3.40 TMC ಮಾತ್ರ. ಅಂದ್ರೆ ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮಾರ್ಥ್ಯದ 3% ರಷ್ಟು ಮಾತ್ರ ನೀರು ಸದ್ಯ ಡ್ಯಾಂನಲ್ಲಿದೆ.
ಒಂದು ಡ್ಯಾಂನಲ್ಲಿ ಕನಿಷ್ಟ 4 ಟಿಎಂಸಿ ನೀರು ಸಂಗ್ರಹವಿರಬೇಕು ಅನ್ನೋ ನಿಯಮವಿದೆ. ಯಾಕಂದ್ರೆ ಡ್ಯಾಂ ನಲ್ಲಿರುವ ಜಲಚರಗಳು ಮತ್ತು ನದಿಯಲ್ಲಿರುವ ಜಲಚರಗಳು ಬದುಕಬೇಕಾದ್ರೆ ಇಷ್ಟೊಂದು ಪ್ರಮಾಣದ ನೀರನ್ನು ಇಟ್ಟುಕೊಳ್ಳಲೇಬೇಕು. ಆದರೆ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರೋದು ಕೇವಲ 3.40 ಟಿಎಂಸಿ ನೀರು ಮಾತ್ರ.
ಕಳೆದ ವರ್ಷ ಇದೇ ಸಮಯದಲ್ಲಿ ಡ್ಯಾಂನಲ್ಲಿ 3.72 ಟಿಎಂಸಿ ನೀರು ಇತ್ತು. ಅಲ್ಲದೇ ಇದೇ ಸಮಯದಲ್ಲಿ ಡ್ಯಾಂ ಗೆ ನೀರಿನ ಒಳಹರಿವು ಆರಂಭವಾಗಿತ್ತು. ಹೀಗಾಗಿ ಡ್ಯಾಂ ನಲ್ಲಿ ನೀರಿನ ಸಂಗ್ರಹ ಆರಂಭವಾಗಿತ್ತು. ಈ ವರ್ಷ ಡ್ಯಾಂಗೆ ಕಳೆದ ಏಳು ತಿಂಗಳಿಂದ ಒಳ ಹರಿವು ಬಂದಾಗಿದೆ. ಡ್ಯಾಂ ನಲ್ಲಿರುವ ನೀರನ್ನು ಈಗಾಗಲೇ ಕೃಷಿ ಸೇರಿದಂತೆ ಕುಡಿಯುವ ನೀರಿಗೆ ಬಿಟ್ಟಿದ್ದರಿಂದ ಸದ್ಯ ಡ್ಯಾಂನಲ್ಲಿ ಕೇವಲ 3.40 ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ ಡೆಡ್ ಸ್ಟೋರೆಜ್ ಇರೋದು ಎರಡು ಟಿಎಂಸಿ ನೀರು. ಬಳಕೆಗೆ ಬರೋದು ಕೇವಲ 1.40 ಟಿಎಂಸಿ ನೀರು ಮಾತ್ರವಾಗಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…
ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ…
22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾಲಯ ಅಮಾವಾಸ್ಯೆ (ಪಿತೃ ಅಮಾವಾಸ್ಯೆ) ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಪಿತೃಗಳಿಗೆ ತರ್ಪಣ, ಶ್ರಾದ್ಧ,…
ಸಾಧಕನು ಮಾತನಾಡುವುದಿಲ್ಲ. ಆತನ ಸಾಧನೆ ಮಾತನಾಡುತ್ತದೆ, ಮಾತನಾಡುತ್ತಿತ್ತು. ನಮ್ಮ ಹಿರಿಯರನೇಕರು ಈ ಹಾದಿಯಲ್ಲಿ…