ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…