ನವೆಂಬರ್ 4 ರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಮಾಲಾ ಅಭಿಯಾನ ನಡೆಯಲ್ಲಿದ್ದು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಮಾಲಾ ಅಭಿಯಾನದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿಯಾನದ ಅಂಗವಾಗಿ ದತ್ತ ಪೀಠಕ್ಕೆ ಆಗಮಿಸುವ ಭಕ್ತರು ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಸೂಚಿಸಿದ್ದಾರೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ದತ್ತಪೀಠಕ್ಕೆ ಮಿನಿ ಬಸ್‌ಗಳಲ್ಲಿ ಮಾತ್ರ ಭಕ್ತರು ಆಗಮಿಸುವಂತೆ ನಿರ್ದೇಶನ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel