ಬಿಜೆಪಿಯ (BJP) ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ಕಳೆದೆರಡು ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಸನದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಅಧ್ಯಯನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್(High commond) ನೇರವಾಗಿ ತಿಳಿಸಿತ್ತು. ಹಾಗಾಗಿ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದರು.
ಡಿವಿಎಸ್ (Sadananda Gowda) ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು. ಸದಾನಂದಗೌಡರು ಬಹುಕಾಲ ರಾಜಕೀಯದಲ್ಲಿ ಇದ್ದವರು. ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗ ಅವರ ಆಲೋಚನೆ ತಿಳಿಸಿದ್ದಾರೆ. ಯಾವ ರೀತಿ ಪಕ್ಷ ಹೇಳುತ್ತೆ ನೋಡೋಣ. ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಪಕ್ಷ ಯಾರನ್ನೂ ಅಗೌರವದಿಂದ ನಡೆಸಿಕೊಳ್ಳಲ್ಲ ಎಂದು ತಿಳಿಸಿದರು.
ಸದಾನಂದಗೌಡ ಅವರು ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು (Bengaluru North Lok Sabha Constituency) ಪ್ರತಿನಿಧಿಸುತ್ತಿದ್ದು, ‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಹೇಳಿದರು.
Former CM BS Yeddyurappa had directly informed the high command that he will not give ticket in the upcoming Lok Sabha elections. So DV Sadananda Gowda has announced his retirement from electoral politics. DVS has retired from electoral politics. But he is active in politics.