ಡಿವಿ ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ವಿದಾಯ | ಟಿಕೆಟ್ ಕೊಡಲ್ಲ ಎಂದಿದ್ದ ಹೈಕಮಾಂಡ್ : ಬಿಎಸ್‌ವೈ ಪ್ರತಿಕ್ರಿಯೆ

November 9, 2023
2:08 PM
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿ ವಿ ಸದಾನಂದ ಗೌಡರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ತಿಳಿಸಿತ್ತು. ಹಾಗಾಗಿ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯ (BJP) ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ಕಳೆದೆರಡು ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಸನದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಅಧ್ಯಯನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa)   ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್(High commond) ನೇರವಾಗಿ ತಿಳಿಸಿತ್ತು. ಹಾಗಾಗಿ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದರು.

ಡಿವಿಎಸ್ (Sadananda Gowda) ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು.  ಸದಾನಂದಗೌಡರು ಬಹುಕಾಲ ರಾಜಕೀಯದಲ್ಲಿ ಇದ್ದವರು. ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗ ಅವರ ಆಲೋಚನೆ ತಿಳಿಸಿದ್ದಾರೆ. ಯಾವ ರೀತಿ ಪಕ್ಷ ಹೇಳುತ್ತೆ ನೋಡೋಣ. ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಪಕ್ಷ ಯಾರನ್ನೂ ಅಗೌರವದಿಂದ ನಡೆಸಿಕೊಳ್ಳಲ್ಲ ಎಂದು ತಿಳಿಸಿದರು.

ಸದಾನಂದಗೌಡ ಅವರು ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು (Bengaluru North Lok Sabha Constituency) ಪ್ರತಿನಿಧಿಸುತ್ತಿದ್ದು, ‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಹೇಳಿದರು.

Former CM BS Yeddyurappa had directly informed the high command that he will not give ticket in the upcoming Lok Sabha elections. So DV Sadananda Gowda has announced his retirement from electoral politics. DVS has retired from electoral politics. But he is active in politics.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror