ಫೆ.16 | ಪುತ್ತೂರಿನಲ್ಲಿ ‘ದ್ವಾರಕೋತ್ಸವ-2025’ | ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ |

February 15, 2025
7:03 AM
ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ ನಡೆಯಲಿದ್ದು, ರಿಯಲ್‌ ಎಸ್ಟೇಟ್‌ ಮತ್ತು ಆರ್ಥಿಕತೆಯ ಬಗ್ಗೆ   ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಅಡಿಕೆಗೆ ಪರ್ಯಾಯದ ಬಗ್ಗೆ  ಡಾ.ಗೋಪಾಲಕೃಷ್ಣ ಕಾಂಚೋಡು ಹಾಗೂ ದೇಸೀ ಗೋವು ಹಾಗೂ ಗವ್ಯೋತ್ಪನ್ನಗಳ ಬಗ್ಗೆ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ ಅವರು ಮಾತನಾಡುವರು. 

“ನಿಮ್ಮ ಮನೆಯ ಕನಸು ನಮ್ಮಲ್ಲಿ ನನಸು” ಎಂಬ ಧೈಯವಾಕ್ಯದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬಡಾವಣೆಗಳನ್ನು ಮತ್ತು ಮನೆಗಳನ್ನು ನಿರ್ಮಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವ ಜೊತೆಗೆ ಹಿರಿಯ ನಾಗರಿಕರಿಗೂ ವಿಶೇಷ ಬಡವಾವಣೆಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸುತ್ತಿರುವ ದ್ವಾರಕಾ ಕಾರ್ಪೋರೇಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ 5 ನೇ ವರ್ಷದ ದ್ವಾರಕೋತ್ಸವ ಫೆ.16ರಂದು ಪುತ್ತೂರು ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ. ಈ ಬಾರಿ ವಿಶೇಷವಾಗಿ ಕೃಷಿ ಹಾಗೂ ಆರ್ಥಿಕ ವಿಚಾರಗೋಷ್ಟಿ ನಡೆಯಲಿದೆ. ಇದೇ ಸಂದರ್ಭ ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ  ನಡೆಯಲಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ತಿಳಿಸಿದ್ದಾರೆ.……… ಮುಂದೆ ಓದಿ…….

Advertisement
Advertisement

ದ್ವಾರಕಾ ಪ್ರತಿಷ್ಠಾನ ವಿವಿಧ ವೈದಿಕ, ಸಾಮಾಜಿಕ, ಸಾಹಿತ್ಯಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧೈಯವಾಗಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳುತ್ತಾರೆ.  ಆರ್ಥಿಕ ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆದಾಯದ ಒಂದಷ್ಟು ಭಾಗವನ್ನು ಈ ಬಗೆಯ ಕಾರ್ಯಕ್ರಮಗಳಲ್ಲಿ ವಿನಿಯೋಗಿಸುವ ಮೂಲಕ ಸಾರ್ಥಕತೆಯನ್ನು ಹೊಂದುವ ಉದ್ದೇಶ ನಮ್ಮದಾಗಿದೆ ಎನ್ನುತ್ತಾರೆ.

ಫೆ.16 ರಂದು ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ನೆರವೇರಿಸಲಿದ್ದು, ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ಟ ಅರ್ತ್ಯಡ್ಕ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ತಜ್ಞ, ಆಪ್ತ ಸಲಹೆಗಾರ್ತಿ ಡಾ.ಸುಲೇಖಾ ವರದರಾಜ್, ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ (ಸಾವಯವ ಕೃಷಿ), ಡಾ.ಗೋಪಾಲಕೃಷ್ಣ ಕಾಂಚೋಡು (ಭಾರತೀಯ ಸೇನೆ), ಪದ್ಯಾಣ ಶಂಕರನಾರಾಯಣ ಭಟ್ಟ (ಯಕ್ಷಗಾನ ಹಿಮ್ಮೇಳ), ಸ್ವಸ್ತಿಕ್ ಪದ್ಮ ಮುರ್ಗಜೆ (ವೈಜ್ಞಾನಿಕ ಸಂಶೋಧನೆ) ಹಾಗೂ ಸುದರ್ಶನ ಭಟ್ಟ ಬೆದ್ರಡಿ (ಆಹಾರೋದ್ಯಮ) ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಬೆಳಗ್ಗೆ 11.30 ರಿಂದ ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ ನಡೆಯಲಿದ್ದು, ರಿಯಲ್‌ ಎಸ್ಟೇಟ್‌ ಮತ್ತು ಆರ್ಥಿಕತೆಯ ಬಗ್ಗೆ   ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಅಡಿಕೆಗೆ ಪರ್ಯಾಯದ ಬಗ್ಗೆ  ಡಾ.ಗೋಪಾಲಕೃಷ್ಣ ಕಾಂಚೋಡು ಹಾಗೂ ದೇಸೀ ಗೋವು ಹಾಗೂ ಗವ್ಯೋತ್ಪನ್ನಗಳ ಬಗ್ಗೆ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ ಅವರು ಮಾತನಾಡುವರು. 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group