ಮಹಾರಾಷ್ಟ್ರದ ವಿಜಯವಾಡದಲ್ಲಿ ಶನಿವಾರ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜಿಂಗ್‌ನಲ್ಲಿ ಇರಿಸಿದ್ದರು. ಶಿವಕುಮಾರ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ.
ಶಿವಕುಮಾರ್ ಅವರು ಶುಕ್ರವಾರ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಒಂದು ವಾರದ ಅವಧಿಯಲ್ಲಿ ಇದು ಎರಡನೇ ಘಟನೆಯಾಗಿದೆ. ಏಪ್ರಿಲ್ 19 ರಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು. ಆ ಪ್ರಕರಣದಲ್ಲೂ ಬ್ಯಾಟರಿ ಚಾರ್ಜ್ ಆಗುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಬಿ.ರಾಮಸ್ವಾಮಿ ಮೃತಪಟ್ಟರೆ, ಅವರನ್ನು ರಕ್ಷಿಸಲು ಯತ್ನಿಸಿದ ಪುತ್ರ ಬಿ.ಪ್ರಕಾಶ್ ಹಾಗೂ ಪುತ್ರಿ ಕಮಲಮ್ಮ ಅವರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.