ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ ಎಂದು ದ ಕ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆ ತಿಳಿಸಿದೆ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel