ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…