ಭಾರತದಲ್ಲಿ ಇದೀಗ ಇ ತ್ಯಾಜ್ಯ ಉತ್ಪಾದನೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿದೆ. ಕಳೆದ ವರ್ಷ ಭಾರತವು 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಇದೀಗ ಈ ತ್ಯಾಜ್ಯ ಉತ್ಪಾದನೆಯೇ ತಲೆನೋವಿನ ಸಮಸ್ಯೆಯಾಗಲಿದೆ.
ಕಳೆದ ಎರಡು ವರ್ಷಗಳಲ್ಲಿ ಇ ತ್ಯಾಜ್ಯ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಲಾಕ್‌ಡೌನ್ ಸಮಯದಲ್ಲಿ ಅನೇಕ ಜನರು ಸಾಮಾನ್ಯಕ್ಕಿಂತ ಹೆಚ್ಚು ತಂತ್ರಜ್ಞಾನವನ್ನು ಅವಲಂಬಿಸಿರುವುದರಿಂದ ಕಳೆದ ವರ್ಷ ಇ-ತ್ಯಾಜ್ಯ ಉತ್ಪಾದನೆಯು ಹೆಚ್ಚಾಗಿದೆ ಎಂದು ಅಧ್ಯಯನಗಳು ಹೇಳಿದೆ. ಅಭಿವೃದ್ಧಿ, ತಂತ್ರಜ್ಞಾನಗಳ ಬಳಕೆ ಈಗ ಹೆಚ್ಚಾಗುತ್ತಿರುವುದು ಇವುಗಳ ನಿಯಂತ್ರಣದ ಬಗ್ಗೆ ಈಗ ಹೆಚ್ಚಿನ ಅಧ್ಯಯನಗಳು ಆರಂಭವಾಗುತ್ತಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಈ ಬಗ್ಗೆ ಈಗಲೇ ಕ್ರಮ ಅಗತ್ಯ ಎಂಬುದನ್ನು ಕೂಡಾ ಎಚ್ಚರಿಸಲಾಗಿದೆ.
ಸ್ವೀಡಿಷ್ ಸೊಸೈಟಿ ಫಾರ್ ನೇಚರ್ ಕನ್ಸರ್ವೇಶನ್ ಪ್ರಾಯೋಜಿಸಿದ ಮತ್ತು ಅಡ್ವೊಕಸಿ ಗ್ರೂಪ್ ಕನ್ಸ್ಯೂಮರ್ ಯೂನಿಟಿ & ಟ್ರಸ್ಟ್ ಸೊಸೈಟಿ ನಡೆಸಿದ ಅಧ್ಯಯನವು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಹಾಗೂ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಪರಿಶೀಲಿಸಿದೆ. ಈಗಿನ ಸನ್ನಿವೇಶದಲಿ ಇ ತ್ಯಾಜ್ಯ ಕಡಿಮೆ ಮಾಡಲು ಸರ್ಕಾರವು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದ ಹೊರತು 2030 ರ ವೇಳೆಗೆ ಭಾರತವು ಪರಿಸರಕ್ಕೆ ಸಂಬಂಧಿಸಿದ ಪ್ರಮುಖ ಗುರಿಯನ್ನು ತಲುಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. 2030 ರ ವೇಳೆಗೆ ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಪರಿಸರದ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಭಾರತವು ಹಸಿರು ಮೂಲಸೌಕರ್ಯ ರಚಿಸಬೇಕು ಎಂದು ಸಲಹೆ ನೀಡಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.