Advertisement
Opinion

ಹಸಿವಾದಾಗ ತಿನ್ನಿ, ಹಸಿವಾದಾಗಲೇ ತಿನ್ನಿ… | ನಮಗೆ ಹಸಿವಾದಾಗ ಸಮಯಕ್ಕೆ ಸರಿಯಾಗಿ ಊಟ ಮಾಡದಿದ್ದರೆ ಏನಾಗುತ್ತದೆ?

Share

ಕೆಲಸ ಜಾಸ್ತಿ ಎಂದು ಅನೇಕರು ಆಹಾರ ತ್ಯಜಿಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದು ದೇಹದಲ್ಲಿ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು ಮತ್ತು ಕಾರ್ಯಕ್ಷಮತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಇವು ದುಷ್ಪರಿಣಾಮಗಳು:

  • ತಲೆತಿರುಗುವಿಕೆ: ಹಸಿವು ಹೆಚ್ಚಾಗಿ ದೌರ್ಬಲ್ಯ ಮತ್ತು ತಲೆತಿರುಗುವಿಕೆಗೆ ಕಾರಣವಾಗುತ್ತದೆ.
  • ಉದ್ವೇಗ-ಉತ್ಕರ್ಷ: ಹಸಿದ ಸ್ಥಿತಿಯಲ್ಲಿ, ದೇಹವು ಕಾರ್ಟಿಸೋಲ್ ಅನ್ನು ಉತ್ಪಾದಿಸುತ್ತದೆಹಾರ್ಮೋನುಗಳು ಹೆಚ್ಚಾಗುತ್ತವೆ. ಇದು ಒತ್ತಡಕ್ಕೆ ಕಾರಣವಾಗುತ್ತದೆ.
  • ಬೊಜ್ಜು ಹೆಚ್ಚಾಗುತ್ತದೆ: ಹಸಿವಾದಾಗ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿದ್ದರೆ ಆಗಾಗ ತಿಂದರೆ ತೂಕ ಹೆಚ್ಚುತ್ತದೆ ಅಂದರೆ ಸ್ಥೂಲಕಾಯ… ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇದ್ದರೆ ಚಯಾಪಚಯ ಕ್ರಿಯೆಯಲ್ಲಿ ತೊಂದರೆಯಾಗಿ ಕೊಬ್ಬು ಶೇಖರಣೆಯಾಗುತ್ತದೆ. ಆದ್ದರಿಂದ ನೀವು ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಬಯಸಿದರೆ, ನಿಮಗೆ ಹಸಿವಾದಾಗ ಸಮಯಕ್ಕೆ ಪೌಷ್ಟಿಕಾಂಶದ ಆಹಾರವನ್ನು ಸೇವಿಸಿ ಮತ್ತು ಕನಿಷ್ಠ 20 ನಿಮಿಷಗಳ ಕಾಲ ವ್ಯಾಯಾಮ ಮಾಡಿ…
  • ಮೆದುಳಿನ ಕಾರ್ಯವು ಹದಗೆಡುತ್ತದೆ: ಮೆದುಳು ಗ್ಲೂಕೋಸ್ ಸಹಾಯದಿಂದ ಕಾರ್ಯನಿರ್ವಹಿಸುತ್ತದೆ. ಇದಕ್ಕಾಗಿ ಸರಿಯಾದ ಸಮಯಕ್ಕೆ ಯೋಗ್ಯ ಪ್ರಮಾಣದಲ್ಲಿ ತಿನ್ನಿರಿ. ಇಲ್ಲದಿದ್ದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ಕಡಿಮೆಯಾಗುತ್ತದೆ. ಏಕಾಗ್ರತೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
  • ಸಿಡುಕುತನ : ಹಸಿವು ಹೆಚ್ಚು ಕಿರಿಕಿರಿಯನ್ನು ಉಂಟುಮಾಡುತ್ತದೆ. ರಕ್ತದ ಸಕ್ಕರೆಯ ಕುಸಿತವು ನಿಮ್ಮ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ, ಮೆದುಳಿನಂತೆಯೇ…

ದಿನಕ್ಕೆ ಮೂರಕ್ಕಿಂತಲೂ ಹೆಚ್ಚು ಬಾರಿ ಹಸಿವು ಆಗುತ್ತಿದ್ದರೆ ಇದು ಅನೈಸರ್ಗಿಕ ಹಸಿವಿನ ಲಕ್ಷಣವಾಗಿರಬಹುದು. ಬೊಜ್ಜು ಪ್ರಕೃತಿ, ಮಧುಮೇಹ, ಥೈರಾಯಿಡ್ ಗಳಂತಹ ಕೆಲವು ಕಾಯಿಲೆಗಳು ಅಥವಾ ಇನ್ನಿತರ ಸಮಸ್ಯೆಗಳಿಂದ ಪದೇಪದೇ ಹಸಿವಾಗಬಹುದು. ಆದ್ದರಿಂದ, ಹೆಚ್ಚು ಹಸಿವಿನ ಕಾರಣವನ್ನು ಕಂಡು ಹಿಡಿದು ಅದರ ಪರಿಹಾರಗಳನ್ನು ಮಾಡಿಕೊಳ್ಳುವುದು ಸೂಕ್ತ. ದಿನಕ್ಕೆ ಮೂರು ಬಾರಿಗಿಂತಲೂ ಜಾಸ್ತಿ ತಿನ್ನುವುದು ಒಳ್ಳೆಯದಲ್ಲ.

ಬರಹ :
ಡಾ. ಪ್ರ. ಅ. ಕುಲಕರ್ಣಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

3 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

11 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

12 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

13 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

23 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

23 hours ago