ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು. ಚಳಿಗಾಲದಲ್ಲಿ ಎಳ್ಳು ಸೇವನೆ ಉತ್ತಮ. ಇದರಲ್ಲಿ ಆರೋಗ್ಯಕರ ಕೊಲೆಸ್ಟ್ರಾಲ್ ಗಳು, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿದ್ದು, ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ಎಳ್ಳು ಒಳ್ಳೆದು. ಯಾವ ರೀತಿ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ…?
- ಹೃದಯದ ಆರೋಗ್ಯಕ್ಕೆ: ಇದರಲ್ಲಿ ಆರೋಗ್ಯಕರ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ, ರಕ್ತನಾಳವನ್ನು ಆರೋಗ್ಯವಾಗಿಡಲು ಸಹಕರಿಸುತ್ತದೆ.
- ಮೂಳೆಗಳನ್ನು ಬಲಪಡಿಸುತ್ತದೆ: ಇದರಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಮ್ ಮತ್ತು ರಂಜಕದಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಎಳ್ಳುವನ್ನು ಜಿಯಮಿತವಾಗಿ ಸೇವಿಸುವುದರಿಂದ ಮೂಳೆ ಸಾಂದ್ರತೆಯನ್ನು ಹೆಚ್ಚಿಸಲು ಮತ್ತು ಮೂಲೆ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
- ಜೀರ್ಣಕ್ರಿಯೆಗೆ ಸಹಕಾರಿ: ಎಳ್ಳು ನಾರಿನಂಶದಿಂದ ಸಮೃದ್ಧವಾಗಿದೆ. ಆದ್ದರಿಂದ ಅವು ಕರುಳಿನ ಚಲನೆಯನ್ನು ನಿಯಂತ್ರಿಸಲು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇವುಗಳಲ್ಲಿರುವ ನಾರು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.
- ರಕ್ತದಲ್ಲಿರುವ ಸಕ್ಕರೆ ಮಟ್ಟ ನಿಯಂತ್ರಣ: ಎಳ್ಳಿನಲ್ಲಿರುವ ನಾರಿನಂಶ ರಕ್ತದಲ್ಲಿ ಸಕ್ಕರೆ ಮಟ್ಟ ಹೀರಿಕೊಳ್ಳುವುದನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿ ಕಾಪಾಡಿಕೊಳ್ಳಲು ಸಹಕಾರಿಸುತ್ತದೆ.
- ಉತ್ಕರ್ಷಣ ನಿರೋಧಕಗಳು: ಎಳ್ಳು ಸೆಸಮೋಲ್ ಮತ್ತು ಸೆಸಮಿನ್ ನಂತಹ ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇವು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
- ಚರ್ಮ ಹಾಗೂ ಕೂದಲಿನ ಆರೈಕೆಗೆ ಸಹಕಾರಿ: ಇದರಲ್ಲಿ ಸತು, ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದ್ದು, ಇದು ಚರ್ಮ ಮತ್ತು ಕೂದಲಿನ ಆರೊಗ್ಯವನ್ನು ಸುಧಾರಿಸುತ್ತದೆ.
- ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಇದರಲ್ಲಿ ಸತು, ಕಬ್ಬಿಣ ಮತ್ತು ಸೆಲೆನಿಯಂನಂತಹ ಅಗತ್ಯ ಖನಿಜಗಳಿಂದ ಸಮೃದ್ಧವಾಗಿರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
- ಚಯಾಪಚಯ ಕ್ರಿಯೆ ಹೆಚ್ಚಿಸುತ್ತದೆ: ಎಳ್ಳು ಬಿ ಜೀವಸತ್ವಗಳು, ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದ್ದು, ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

