ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ ಗಮನಹರಿಸಬೇಕು ಎಂದು ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
ಅನೇಕ ಜನರಿಗೆ ಚಿಕಿತ್ಸೆ ನೀಡುವ ಹಾಗೂ ಉಚಿತ ವೈದ್ಯಕೀಯ ಸಲಹೆಯನ್ನು ನೀಡುತ್ತಾ ಸಾಮಾಜಿಕ ಚಟುವಟಿಕೆ ಅದರಲ್ಲೂ ಹೃದ್ರೋಗಕ್ಕೆ ಸಂಬಂಧಿಸಿ ಗ್ರಾಮೀಣ ಭಾಗದಲ್ಲೂ ಜಾಗೃತಿ ಮೂಡಿಸುತ್ತಿರುವ ಮಂಗಳೂರಿನ ಡಾ.ಪದ್ಮನಾಭ ಕಾಮತ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಕ್ಷಣವೇ ECG Telemedicine ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಗೆ ಹೃದಯಾಘಾತವಾಯಿತು .ತಕ್ಷಣವೇ ಅಂಬುಲೆನ್ಸ್ ಮೂಲಕ ಮಂಗಳೂರು ತಲುಪುವಷ್ಟರಲ್ಲೇ ಕಾಲ ಮೀರಿ ಹೋಗಿತ್ತು . ಅವರು ತಮ್ಮ ಸ್ವಂತ ವಾಹನದಲ್ಲಿ ದೇಗುಲಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬಂದಿರುವ ವ್ಯಕ್ತಿಗೆ ಈ ರೀತಿ ಆದಾಗ ತಕ್ಷಣಕ್ಕೆ ವ್ಯವಸ್ಥೆ ನೀಡುವ ಆರೋಗ್ಯ ವ್ಯವಸ್ಥೆ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟಿದ ದಿನ . ಇವರ ಸ್ಮರಣಾರ್ಥ CAD ಮಂಗಳೂರು ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸ್ತಾಪಿತ ಹೆಲ್ತ್ ಸೆಂಟರ್ ಗೆ ECG Telemedicine ಯಂತ್ರ ಯಂತ್ರ ಕೊಡುವ ನಿರ್ಧಾರ ಮಾಡಲಾಗಿದೆ. ಇದು ದೇವಸ್ಥಾನದ ಆವರಣದಲ್ಲೇ ಇಡಬೇಕೆಂದು ಎಂದು ಡಾ.ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…