ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

November 6, 2024
10:41 PM

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror