ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು.
ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ. ಸೆಪ್ಟೆಂಬರ್‌ನಲ್ಲಿ ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ. ಆದರೆ ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.
ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು ಅವಲಂಬಿತವಾಗಿದೆ ಎಂದ ಶಕ್ತಿಕಾಂತ್ ದಾಸ್, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…