2023-24ರ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆ ದಾಖಲೆಯು ಆರ್ಥಿಕತೆಯ ಸ್ಥಿತಿ ಮತ್ತು 2023-24 ರ (ಏಪ್ರಿಲ್-ಮಾರ್ಚ್) ವಿವಿಧ ಸೂಚಕಗಳ ಬಗ್ಗೆ ಒಳನೋಟಗಳನ್ನು ನೀಡುತ್ತದೆ.ಜಿಡಿಪಿ ದರ, ಹಣಕಾಸು ಪರಿಸ್ಥಿತಿ ಇತ್ಯಾದಿ ಬಗ್ಗೆ ಆರ್ಥಿಕ ಸಮೀಕ್ಷೆ ಆಶಾದಾಯಕವೆನಿಸುವ ಚಿತ್ರಣ ನೀಡಿದೆ. ಆರ್ಥಿಕ ಬೆಳವಣಿಗೆಯ ಓಟಕ್ಕೆ ತಡೆಯಾಗಿರುವ ಕೆಲ ಅಂಶಗಳ ಬಗ್ಗೆಯೂ ಈ ಸಮೀಕ್ಷೆ ಎಚ್ಚರಿಸುವ ಕೆಲಸ ಮಾಡಿದೆ.
ದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಳ್ಳಬೇಕಾದರೆ 2030ರವರೆಗೂ ಕೃಷಿಯೇತರ ಕ್ಷೇತ್ರದಲ್ಲಿ ಪ್ರತೀ ವರ್ಷ ಸರಾಸರಿಯಾಗಿ 78.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಅವಶ್ಯಕತೆ ಇದೆ ಎಂದು ಆರ್ಥಿಕ ಸಮೀಕ್ಷೆ ಅಭಿಪ್ರಾಯಪಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ವಿನಿಮಯ ಮೀಸಲು ಹೊಂದಿರುವ ಜಗತ್ತಿನ ಪ್ರಮುಖ ರಾಷ್ಟ್ರಗಳಿಗೆ ಹೋಲಿಸಿದರೆ, ಇತ್ತೀಚೆಗೆ ಮುಗಿದ 2023-24ರ ಹಣಕಾಸು ವರ್ಷದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಅತ್ಯಧಿಕ ಏರಿಕೆಯಾಗಿದೆ ಎಂದು ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ ಹೇಳಿದೆ.
2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7ರಷ್ಟು ಬೆಳೆಯಬಹುದು ಎಂದು ಐಎಂಎಫ್, ಎಡಿಬಿ ಇತ್ಯಾದಿ ಗ್ಲೋಬಲ್ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ.ಆರ್ಥಿಕ ಸಮೀಕ್ಷೆಯು ಹಣದುಬ್ಬರದ ಬಗ್ಗೆ ತೀರಾ ಆಶಾದಾಯಕವಾಗಿಲ್ಲ. ಜಾಗತಿಕ ವಿದ್ಯಮಾನಗಳು ಮತ್ತು ಪ್ರತಿಕೂಲ ಹವಾಮಾನವು ಹಣದುಬ್ಬರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿರುವ ಈ ವರದಿಯ ಪ್ರಕಾರ, 2024-25ರಲ್ಲಿ ಹಣದುಬ್ಬರ ದರ ಶೇ. 4.5ರಷ್ಟು ಇರಬಹುದು.
ಸಮೀಕ್ಷೆಯ ಕೆಲವು ಅಂಶಗಳು ಹೀಗಿದೆ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…