ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel