5 ಹಾಗೂ 8ನೇ ತರಗತಿ ಬೋರ್ಡ್ ಎಕ್ಸಾಂ : ನಿಮ್ಮ ನಿಮ್ಮ ಶಾಲೆಯಲ್ಲೇ ನಡೆಯುತ್ತೆ

March 10, 2023
1:45 PM

ಈ ವರ್ಷದಿಂದ 5 ನೇ ಹಾಗೂ 8 ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ. ಯಾವ ಶಾಲೆಯಲ್ಲಿ ಪರೀಕ್ಷೆ ನಡೆಸುತ್ತಾರೆ ಅವರನ್ನು ಹೇಗೆ ಕರೆದುಕೊಂಡು ಹೋಗೋದು ಅನ್ನೋ ಬಗ್ಗೆ ಚಿಂತೆ ಬೇಡ. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ನಿಮ್ಮ ಮಕ್ಕಳು ಈಗ ಯಾವ ಶಾಲೆಯಲ್ಲಿ ಓದುತ್ತಿದ್ದಾರೋ ಅದೇ ಶಾಲೆಯಲ್ಲಿ ನಿಮ್ಮ ಮಕ್ಕಳಿಗೆ ಪರೀಕ್ಷೆ ನಡೆಯುತ್ತದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದ್ದರಿಂದ ಖಂಡಿತ ಈ ಬಾರಿ ಪಬ್ಲಿಕ್​ ಪರೀಕ್ಷೆ ನಡೆದೇ ನಡೆಯುತ್ತದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ ಈ ವೇಳಾಪಟ್ಟಿಯ ಪ್ರಕಾರ ಪರೀಕ್ಷೆ ನಡೆಯುತ್ತದೆ.

ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ನಿಮ್ಮ ಮಕ್ಕಳು ಎಷ್ಟು ಅಂಕ ಪಡೆದಿದ್ದಾರೆ ಎಂಬುದು ಆ ನಂತರ ಬಿಡುಗಡೆಯಾಗುವ ಫಲಿತಾಂಶದಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror