ಈ ವರ್ಷದಿಂದ 5 ನೇ ಹಾಗೂ 8 ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ. ಯಾವ ಶಾಲೆಯಲ್ಲಿ ಪರೀಕ್ಷೆ ನಡೆಸುತ್ತಾರೆ ಅವರನ್ನು ಹೇಗೆ ಕರೆದುಕೊಂಡು ಹೋಗೋದು ಅನ್ನೋ ಬಗ್ಗೆ ಚಿಂತೆ ಬೇಡ. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ ನಿಮ್ಮ ಮಕ್ಕಳು ಈಗ ಯಾವ ಶಾಲೆಯಲ್ಲಿ ಓದುತ್ತಿದ್ದಾರೋ ಅದೇ ಶಾಲೆಯಲ್ಲಿ ನಿಮ್ಮ ಮಕ್ಕಳಿಗೆ ಪರೀಕ್ಷೆ ನಡೆಯುತ್ತದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದ್ದರಿಂದ ಖಂಡಿತ ಈ ಬಾರಿ ಪಬ್ಲಿಕ್ ಪರೀಕ್ಷೆ ನಡೆದೇ ನಡೆಯುತ್ತದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ ಈ ವೇಳಾಪಟ್ಟಿಯ ಪ್ರಕಾರ ಪರೀಕ್ಷೆ ನಡೆಯುತ್ತದೆ.
ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ನಿಮ್ಮ ಮಕ್ಕಳು ಎಷ್ಟು ಅಂಕ ಪಡೆದಿದ್ದಾರೆ ಎಂಬುದು ಆ ನಂತರ ಬಿಡುಗಡೆಯಾಗುವ ಫಲಿತಾಂಶದಿಂದ ತಿಳಿದು ಬರುತ್ತದೆ.
ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…