ಕಲಿಕಾ ಗುಣಮಟ್ಟ ಹೆಚ್ಚಿಸಲು ಈ ವರ್ಷ 5 ರಿಂದ 8 ನೇ ತರಗತಿ ಮಕ್ಕಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧಾರ | ಸಚಿವ ಬಿ.ಸಿ. ನಾಗೇಶ್

Advertisement
Advertisement

ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.

Advertisement
Advertisement

ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕಲಿಕಾ ಗುಣಮಟ್ಟ ಹೆಚ್ಚಿಸಲು ಈ ವರ್ಷ 5 ರಿಂದ 8 ನೇ ತರಗತಿ ಮಕ್ಕಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧಾರ | ಸಚಿವ ಬಿ.ಸಿ. ನಾಗೇಶ್"

Leave a comment

Your email address will not be published.


*