ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.
ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…