ಕಾಂಗ್ರೆಸ್ ಸರ್ಕಾರದಿಂದ ಮತ್ತೆ ವಾರದಲ್ಲಿ 2 ದಿನ ಮೊಟ್ಟೆ ನೀಡಲು ನಿರ್ಧಾರ | ಶಿಕ್ಷಣ ಸಚಿವರಿಂದ ಮಂಡ್ಯದಲ್ಲಿ ಚಾಲನೆ |

August 18, 2023
1:48 PM
ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.

ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆ, ಬಾಳೆಹಣ್ಣನ್ನು ಒಂದು ದಿನಕ್ಕೆ ಕಳೆದ ಜೂನ್‌ 21 ರಂದು ಕಾಂಗ್ರೆಸ್‌ ಸರ್ಕಾರ ಕಡಿತಗೊಳಿಸಲಾಗಿತ್ತು. ಆದರೆ ಈಗ  ಸರ್ಕಾರ ಶಾಲಾ ಮಕ್ಕಳ ಆರೋgಗ್ಯ ದೃಷ್ಟಿಯಿಂದ ವಾರಕ್ಕೆ ಒಂದೇ ದಿನ ನೀಡಲು ನಿರ್ಧರಿಸಿದ್ದ ಯೋಜನೆಯನ್ನು ಮತ್ತೆ ಎರಡು ದಿನಕ್ಕೆ ವಿಸ್ತರಿಸಿದೆ.

ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ.  ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಿದರು.

ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಿದರು. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror