ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆ, ಬಾಳೆಹಣ್ಣನ್ನು ಒಂದು ದಿನಕ್ಕೆ ಕಳೆದ ಜೂನ್ 21 ರಂದು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಲಾಗಿತ್ತು. ಆದರೆ ಈಗ ಸರ್ಕಾರ ಶಾಲಾ ಮಕ್ಕಳ ಆರೋgಗ್ಯ ದೃಷ್ಟಿಯಿಂದ ವಾರಕ್ಕೆ ಒಂದೇ ದಿನ ನೀಡಲು ನಿರ್ಧರಿಸಿದ್ದ ಯೋಜನೆಯನ್ನು ಮತ್ತೆ ಎರಡು ದಿನಕ್ಕೆ ವಿಸ್ತರಿಸಿದೆ.
ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಿದರು. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…