25 ದಿನಗಳಲ್ಲಿ 4.12 ಲಕ್ಷ ಕೇಸ್, 22.89 ಕೋಟಿ ದಂಡ – ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್

May 12, 2023
11:10 AM

ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.

Advertisement
Advertisement

ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.

ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ‍್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.

ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror