ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ‍್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…