ದಕ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ | ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ |

December 2, 2022
7:08 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೊಸ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.3 ಮತ್ತು 4ರಂದು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ನಡೆಯಲಿದೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು.

Advertisement
Advertisement

ಡಿ.26ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಮೂಲಕ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆಗೊಳಿಸಬಹುದು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಕಾಲೇಜು ಆಡಳಿತ ಮಂಡಳಿಗಳು ಮತದಾರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

Advertisement

ಈ ಮೊದಲು ಜನವರಿ 1ರೊಳಗೆ 18 ವರ್ಷ ಪೂರ್ಣಗೊಳಿಸಿದವರ ಹೆಸರನ್ನು ಮಾತ್ರ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅವಕಾಶವಿತ್ತು. ಪ್ರಸ್ತುತ 17 ವರ್ಷ ತುಂಬಿದ ಯುವಕರು ಒಂದು ವರ್ಷ ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅದರಂತೆ ವರ್ಷದಲ್ಲಿ ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಮುಂಚಿತವಾಗಿ ಅರ್ಜಿ ಸಲ್ಲಿಸಿದವರನ್ನು ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ರ ಅರ್ಹತಾ ದಿನಾಂಕಕ್ಕೆ 18 ವರ್ಷಗಳನ್ನು ಪೂರ್ಣಗೊಳಿಸುವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಆ ಪ್ರಕಾರ 17 ವರ್ಷ ದಾಟಿದ ಅರ್ಜಿದಾರರು ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದರು.

ಮತದಾನದ ಸಂದರ್ಭ ಯಾವುದೇ ರೀತಿಯ ಆಕ್ಷೇಪಣೆ, ದೂರುಗಳಿಗೆ ಅವಕಾಶವಿರುವುದಿಲ್ಲ. ಹಾಗಾಗಿ ಡಿ. 8ರೊಳಗೆ ಎಲ್ಲ ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಬೇಕು. ಹೆಸರು ಬಿಟ್ಟುಹೋಗಿದ್ದರೆ, ತಿದ್ದುಪಡಿ, ಆಕ್ಷೇಪಣೆ ಇದ್ದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಮೂಲಕ ಸಲ್ಲಿಸಬಹುದು. ವೆಬ್‌ ಪೋರ್ಟಲ್‌ ceokarnataka.kar.nic.in   ನಲ್ಲಿಯೂ ಮತದಾರರು ಪರಿಶೀಲನೆ ನಡೆಸಬಹುದು. ಮತದಾರರ ಜಿಲ್ಲಾ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

Advertisement

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳ ಸಹಿತ ಯಾರಿಂದಲೂ ಇದುವರೆಗೆ ಯಾವುದೇ ದೂರು ಬಂದಿಲ್ಲ. ಬಿಎಲ್‍ಒಗಳು ಪರಿಷ್ಕರಣೆಗೆ ತೆರಳಿಸುವ ಸಂದರ್ಭ ಸೂಕ್ತ ವಿಧಾನದ ಮೂಲಕ ಮರಣ ಆಗಿರುವ, ಹೊರ ದೇಶಗಳಲ್ಲಿರುವ ಮತದಾರರ ಹೆಸರನ್ನು ಪರಿಷ್ಕರಣೆ ಮಾಡಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಸತಿ ಸಮುಚ್ಛಯಗಳಿಗೆ ತೆರಳಿದಾಗ ಅಲ್ಲಿನ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ವರದಿಯಾಗಿದ್ದು, ಬಿಎಲ್‍ಒಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror