ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.
ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮತದಾರರ ಪಟ್ಟಿ ಪರಿಷ್ಕರಣೆ | ಡಿ.8 ರ ವರೆಗೆ ಹಕ್ಕು, ಆಕ್ಷೇಪಣೆಗೆ ಅವಕಾಶ"