ಸುದ್ದಿಗಳು

ಚುನಾವಣಾ ನೀತಿ ಸಂಹಿತೆ | ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಪೋಸ್ಟ್‌ ಮಾಡುವವರಿಗೆ ಎಚ್ಚರಿಕೆ..! |

Share

ವಿಧಾನಸಭೆ ಚುನಾವಣೆಗೆ  ಸಂಬಂಧಿಸಿದಂತೆ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಇದೀಗ ಸಾಮಾಜಿಕ ಜಾಲತಾಣಗಳ ಮೇಲೂ ಇಲಾಖೆಗಳು ಕಣ್ಣಿಟ್ಟಿದೆ. ಸಿಕ್ಕಾಪಟ್ಟೆ ಪೋಸ್ಟ್‌ ಮಾಡುವವರು ಇದನ್ನು ಗಮನಿಸಿಕೊಳ್ಳುವುದು ಉತ್ತಮ.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಕ್ಷೇಪಾರ್ಹ ಪೊಸ್ಟ್‌ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ಹೊರಡಿಸಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು  ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾ ಪೊಲೀಸ್ ಕಚೇರಿಯಲ್ಲಿ, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರುಗಳ ಕಚೇರಿಗಳಲ್ಲಿ ಮಾನಿಟರ್‌ ಮಾಡಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್‌ಗಳು ಕಂಡುಬಂದರೆ  ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ ಹಾಕುವುದು , ಸುಳ್ಳು ಸುದ್ದಿ ಹರಡುವುದು, ಅಶ್ಲೀಲ, ಅಸಭ್ಯ ವಿಷಯಗಳನ್ನು ಒಳಗೊಂಡ ಪೋಸ್ಟ್‌ , ಯಾವುದೇ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚಾರಿತ್ರ್ಯಹರಣ ಹಾಗೂ ಮಾನಹಾನಿ ಉಂಟಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇಂತಹ ಯಾವುದೇ  ಕಾನೂನುಬಾಹಿರ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

3 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

7 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago