ಚುನಾವಣಾ ಕಣ | ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ

April 8, 2023
11:19 PM

ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.

ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್‍ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ  ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror