ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್‍ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…