#BJPStatePresident| ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಯ್ಕೆ ಚುರುಕು : ಸಿಟಿ ರವಿಗೆ ವರಿಷ್ಠರಿಂದ ದೆಹಲಿಗೆ ಬುಲಾವ್

July 31, 2023
1:47 PM
ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಮೇಲೆ ಗಮನ ಹರಿಸುವ ಲಕ್ಷಣ ಕಾಣಿಸುತ್ತಿದೆ. ರಾಜ್ಯ ಬಿಜೆಪಿಗೆ ಮುಂದಿನ ಸಮರ್ಥ ಸಾರಥಿಯ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ.

2023ರ ವಿಧಾನ ಸಭೆ ಚುನಾವಣೆ ನಂತರ ಬಿಜೆಪಿ ಯಾಕೋ ಭಾರಿ ನಿಧಾನ ಗತಿಯಲ್ಲಿ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೈಕಮಾಂಡ್‌ ರಾಜ್ಯದ ನಾಯಕರ ಮೇಲೆ ಭರವಸೆಯನ್ನೇ ಕಳೆದುಕೊಂಡಂತಿದೆ. ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕಟೀಲ್‌ ಅವರನ್ನು ಸ್ಥಾನದಿಂದ ಇಳಿಸಿ ಇನ್ನೋಬ್ಬರನ್ನು ಆಯ್ಕೆ ಮಾಡುವ ಕಸರತ್ತು ಮಾಡುತ್ತಿರುವ ಬಿಜೆಪಿಗೆ ಇನ್ನೂ ಸರಿಯಾದ ಅಭ್ಯರ್ಥಿ ಸಿಕ್ಕಿಲ್ಲ. ಅತ್ತ ವಿರೋಧ ಪಕ್ಷ ನಾಯಕನನ್ನು ಆರಿಸದೇ ಆಡಳಿತ ಪಕ್ಷದಿಂದ ಹಿಗ್ಗಾಮುಗ್ಗಾ ಮಾತು ಕೇಳುತ್ತಿದೆ. ಇದೀಗ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ಸಂಬಂಧ ಒಂದಷ್ಟು ಪೂರಕ ಬೆಳವಣಿಗೆಗಳು ಚುರುಕು ಪಡೆದುಕೊಂಡಿವೆ.

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಹೆಸರು ಕೈಬಿಟ್ಟಿರುವ ವರಿಷ್ಠರು, ಅವರಿಗೆ ಸೋಮವಾರ ದೆಹಲಿಗೆಬುಲಾವ್ ಕೊಟ್ಟಿರೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ಭಾನುವಾರ ಬೆಳಗ್ಗೆ ಆರ್‌ಎಸ್‌ಎಸ್ ಮುಖಂಡರನ್ನು ಸಿ.ಟಿ ರವಿ ಭೇಟಿ ಮಾಡಿರುವುದು ಈ ನಿಟ್ಟಿನಲ್ಲಿ ಇನ್ನಷ್ಟು ಪುಷ್ಠಿ ಕೊಟ್ಟಿದೆ. ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಮೇಲೆ ಗಮನ ಹರಿಸುವ ಲಕ್ಷಣ ಕಾಣಿಸುತ್ತಿದೆ. ರಾಜ್ಯ ಬಿಜೆಪಿಗೆ ಮುಂದಿನ ಸಮರ್ಥ ಸಾರಥಿಯ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಈ ನಿಟ್ಟಿನಲ್ಲಿ ಒಂದಷ್ಟು ಸುಳಿವುಗಳು ಸಿಗುತ್ತಿದ್ದು, ಪೂರಕ ವಿದ್ಯಮಾನಗಳು ನಡೆಯುತ್ತಿವೆ. ಮುಂದಿನ ಬಿಜೆಪಿ ಸಾರಥಿಯಾಗಿ ಮಾಜಿ ಶಾಸಕ ಸಿ.ಟಿ ರವಿ ಹೆಸರು ಮುಂಚೂಣಿಯಲ್ಲಿದೆ.

ಶನಿವಾರವಷ್ಟೇ ಅವರ ಹೆಸರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್ ಕೊಟ್ಟಿರೋದು ಈ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಟಿ ರವಿ, ತಾವೀಗ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಷ್ಟೇ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲದಿದ್ದರೂ ವರಿಷ್ಠರು ಕೊಡುವ ಯಾವುದೇ ಜವಾಬ್ದಾರಿ ನಿಭಾಯಿಸುವುದಾಗಿ ಹೇಳುವ ಮೂಲಕ ಪರೋಕ್ಷವಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ದೆಹಲಿಗೆ ಬರುವಂತೆ ಸಿ.ಟಿ ರವಿಗೆ ಹೈಕಮಾಂಡ್ ನಾಯಕರು ಬುಲಾವ್ ಕೊಟ್ಟಿದ್ದಾರೆ. ಸೋಮವಾರ ದೆಹಲಿಯಲ್ಲಿ ವರಿಷ್ಠರ ಭೇಟಿ ಮಾಡಿ ಸಿ.ಟಿ ರವಿ ಮಾತುಕತೆ ನಡೆಸಲಿದ್ದಾರೆ. ಇನ್ನು ಇದೇ ವೇಳೆ ಭಾನುವಾರ ಬೆಳಗ್ಗೆ ಸಿ.ಟಿ ರವಿ ಬೆಂಗಳೂರಿನಲ್ಲಿ ಹಿರಿಯ ಆರ್‌ಎಸ್‌ಎಸ್ ಮುಖಂಡರನ್ನೂ ಭೇಟಿ ಮಾಡಿ ಮಾತನಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಮತ್ತು ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮೀಕರಣದ ಜೊತೆಗೆ ಎರಡೂ ಹುದ್ದೆಗಳಿಗೂ ಹಿಂದೂ ಫೈರ್ ಬ್ರ್ಯಾಂಡ್ ನಾಯಕರನ್ನೇ ನೇಮಕ ಮಾಡುವ ಲೆಕ್ಕಾಚಾರ ಇದೆ ಎನ್ನಲಾಗಿದೆ. ಆದರೆ ಸದ್ಯಕ್ಕೆ ರಾಜ್ಯಾಧ್ಯಕ್ಷ ಸ್ಥಾನಕ್ಕಷ್ಟೇ ನೇಮಕ ಆಗುತ್ತಾ ಅಥವಾ ಉಭಯ ಸದನಗಳ ವಿಪಕ್ಷ ನಾಯಕರ ಆಯ್ಕೆಯೂ ಫೈನಲ್ ಆಗುತ್ತಾ ಎಂದು ಕಾದು ನೋಡಬೇಕಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror