ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್(Lok sabha speaker) ಹುದ್ದೆಗೆ ಕೊನೆಗೂ ಆಯ್ಕೆ ಪ್ರಕ್ರಿಯೆ ಮುಗಿದಿದೆ. 18ನೇ ಲೋಕಸಭೆಯ ಸ್ಪೀಕರ್ ಆಗಿ 2ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು.
ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.
– ಅಂತರ್ಜಾಲ ಮಾಹಿತಿ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel