ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ | ಚುನಾವಣೆ ಮೂಲಕ ನಡೆದ ಸಭಾಪತಿ ಆಯ್ಕೆ |

June 26, 2024
1:09 PM

ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್‌(Lok sabha speaker) ಹುದ್ದೆಗೆ ಕೊನೆಗೂ ಆಯ್ಕೆ ಪ್ರಕ್ರಿಯೆ ಮುಗಿದಿದೆ. 18ನೇ ಲೋಕಸಭೆಯ ಸ್ಪೀಕರ್‌ ಆಗಿ 2ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್‌ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು.
ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror