ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ. ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.
ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel