ವಿಧಾನಸಭೆ ಚುನಾವಣೆ ತಯಾರಿ ಆರಂಭವಾಗಿದೆ. ಆಡಳಿತ ಪಕ್ಷ ಬಿಜೆಪಿ ಗುದ್ದಲಿ ಪೂಜೆ, ಉದ್ಘಾಟನೆ, ಓಲೈಕೆಗಳನ್ನು ಆರಂಭಿಸಿದರೆ, ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ನೀಡತೊಡಗಿದೆ. ಈಗಾಗಲೇ ಪ್ರತೀ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದರೆ, ಅದರ ಜೊತೆಗೆ ಇನ್ನಷ್ಟು ಕೊಡುಗೆಗಳ ಘೋಷಣೆ ಮಾಡಿದೆ.
ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2,000 ರೂ., ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸುತಾಗಿ ಘೋಷಣೆ ಮಾಡಿರುವ ಕಾಂಗ್ರೆಸ್, ಈಗ ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಹೇಳಿದೆ.
ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಜೊತೆಗೆ ರೈತರು ಮತ್ತು ಸ್ತ್ರೀಶಕ್ತಿ ಸಾಲದ ಮೊತ್ತವನ್ನು ಹೆಚ್ಚಳ ಮಾಡಲಾಗುವುದು. ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು ಮೂರರಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ರೈತರಿಗೆ ಶೇಕಡ ಮೂರರ ಬಡ್ಡಿ ದರದ ಸಾಲವನ್ನು 5 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement