ಪ್ರತಿ ಚುನಾವಣೆಯಲ್ಲಿ ಸಹ ಭಾರತ ಚುನಾವಣಾ ಆಯೋಗ ವಿಶೇಷ ಘೋಷ ವಾಕ್ಯ ಹಾಗೂ ಲೋಗೋವನ್ನು ಘೋಷಣೆ ಮಾಡುತ್ತದೆ. ಅದೇ ರೀತಿ ಈ ಚುನಾವಣೆಗಾಗಿ ‘ಚುನಾವಣಾ ಪರ್ವ – ದೇಶದ ಗರ್ವ’ ಎನ್ನುವ ಘೋಷ ವಾಕ್ಯವನ್ನು ಅಳವಡಿಸಿಕೊಳ್ಳಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಎಲ್ಲರನ್ನೂ ಒಳಗೊಳ್ಳುವ, ಸುಗಮ, ನೈತಿಕ, ಭಾಗವಹಿಸುವಿಕೆಯ ಜೊತೆಗೆ ಮಾಹಿತಿಯುಕ್ತ ಚುನಾವಣೆಯನ್ನು ರಾಜ್ಯದಾದಂತ್ಯ ಪ್ರಜಾಪ್ರಭುತ್ವದ ಹಬ್ಬದ ರೀತಿ ಆಚರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ವಿಶೇಷಚೇತನ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ವಿಶೇಷ ಚೇತನ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ವಿಶೇಷ ಚೇತನ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
SVEEP (Systematic Voters Education Electoral Participation) ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ ಅಡಿಯಲ್ಲಿ ಎಲ್ಲಾ ಮತದಾರರಲ್ಲಿ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲು SVEEP Interventions ನಲ್ಲಿ ಮುಖ್ಯವಾಗಿ ಮಹಿಳಾ ಮತದಾರರು, ಯುವ ಮತದಾರರು, ವಿಶೇಷ ಚೇತನರು, ಆದಿವಾಸಿ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ SVEEP Awareness ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಮಹಿಳಾ ಮತದಾರರನ್ನು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 05 ಸಖಿ ಮತಗಟ್ಟೆಗಳನ್ನು ರಾಜ್ಯಾದ್ಯಂತ ಒಟ್ಟು 1120 ಮತಗಟ್ಟೆಗಳನ್ನು ಮಹಿಳೆಯರಿಂದಲೇ ನಿರ್ವಹಿಸಲಾಗುತ್ತದೆ. ಈ ಮತಗಟ್ಟೆಗಲ್ಲಿ ಪೊಲೀಸ್ ಸಿಬ್ಬಂದಿ, ಗ್ರೂಪ್ ಡಿ ನೌಕರರು ಹಾಗೂ ಎಲ್ಲಾ ಮತಗಟ್ಟೆಯ ಅಧಿಕಾರಿಗಳು ಮಹಿಳೆಯರೇ ಆಗಿರುತ್ತಾರೆ.
ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ಯುವ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಯುವ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ. ಎಲ್ಲಾ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ಧ್ಯೇಯ ಆಧಾರಿತ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಆಯಾ ಜಿಲ್ಲೆಗಳ ವಿಶೇಷತೆ, ಪ್ರಾದೇಶಿಕ ಸಾಂಸ್ಕೃತಿಕ ಸೊಗಡಿನ ಹಿನ್ನೆಲೆಯಲ್ಲಿ, ಪಾರಂಪರಿಕ ಕುಶಲ ಕಲೆಗಳು, ವಿನೂತನ ಪ್ರಯೋಗಗಳು, ಜಾಗತಿಕ ಸಂದೇಶ ಸಾರುವಂತಹ ಮಾದರಿಯಲ್ಲಿ ರಚಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
- ಅಂತರ್ಜಾಲ ಮಾಹಿತಿ