80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?

April 30, 2023
9:59 AM

ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್​ ಪೇಪರ್​ ವೋಟಿಂಗ್​ ಶುರುವಾಗಿದೆ. ರಾಜ್ಯದಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್​ ಕಮಿಷನ್​ ಶುರುಮಾಡಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್​ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ  ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.

ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್

ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.

2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್​ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror