ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರುವಾಗಿದೆ. ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್ ಕಮಿಷನ್ ಶುರುಮಾಡಿದೆ.
2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ
ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.
ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.
2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…