Advertisement
ಸುದ್ದಿಗಳು

ಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

Share

ಕರ್ನಾಟಕದಲ್ಲಿ ಬಿಜೆಪಿ  ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿ ಕೈಗೊಂಡ ತಪ್ಪು ನಿರ್ಧಾರ, ಗುಜರಾತ್​ ಮಾದರಿ ಪ್ರಯೋಗ ಹಾಗೂ ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Advertisement
Advertisement

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಖಾಸಗಿ ವಾಹಿನಿ ಟಿವಿ9  ಜೊತೆ ಮಾತನಾಡಿದ ಅವರು, ಕಾಂಗ್ರೆಸ್​ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನರು ಹೇಳುತ್ತಿದ್ದರು. ಆವಾಗಲೇ ನಮಗೆ ಸೋಲಾಗಿಯಿತು ಎಂದರು.

Advertisement

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದು ಹೇಳಿದ ರೇಣುಕಾಚಾರ್ಯ, ತನ್ನ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಈ ಸೋಲು ತೀವ್ರ ಬೇಸರವನ್ನು ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ದಲಿತರಿಗೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮಾಜಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ನಾಯಕರಿದ್ದಾರೆ. ಆದರೆ ಇಂತಹ ಪ್ಲಾನ್ ಬಿಜೆಪಿಯಲ್ಲಿ ಮಾಡಲೇ ಇಲ್ಲ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

4 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

5 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago