ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |

May 8, 2023
9:53 PM

ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 

ಯಾವುದಕ್ಕೆಲ್ಲ ನಿರ್ಬಂಧ? : ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿರುವ ಈ ಸಂದರ್ಭದಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ. ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೂ ನಿರ್ಬಂಧ ಹೇರಿದೆ. ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.

ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಮೇ 8 ಸಂಜೆ 6 ಗಂಟೆಯ ನಂತರ  ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ. ಅಭ್ಯರ್ಥಿಗಳ ನಡುವಣ ದ್ವೇಷ ಹೆಚ್ಚಿಸುವಂಥ ಹಾಗೂ ದ್ವೇಷ ಸೃಷ್ಟಿಸುವಂತಹ ಯಾವುದೇ ಚಟುವಟಿಕೆ ನಡೆಸಬಾರದು.ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇರಿಸಬೇಕು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror